ಪ್ರಜಾಸ್ತ್ರ ಸುದ್ದಿ
ನವದೆಹಲಿ: ಅರುಣಾಚಲ ಪ್ರದೇಶದ ತಾವಾಂಗ್ ಜಿಲ್ಲೆಯ ಚೀನಾ ಜೊತಗಿನ ಗಡಿ ಪ್ರದೇಶದಲ್ಲಿ ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಪತನಗೊಂಡಿದೆ. ಪೈಲೆಟ್ ಮೃತಪಟ್ಟಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ.
ನಿಯಮತ ಹಾರಾಟದಲ್ಲಿದ್ದರೂ ಹೆಲಿಕಾಪ್ಟರ್ ಪತನಗೊಂಡಿದೆ. ಇದಕ್ಕೆ ಕಾರಣ ತಿಳಿದು ಬಂದಿಲ್ಲವೆಂದು ರಕ್ಷಣಾ ಇಲಾಖೆಯ ವಕ್ತಾರ ಕರ್ನಲ್ ಎ.ಎಸ್ ವಾಲಿ ಹೇಳಿದ್ದಾರೆ. ಗಾಯಗೊಂಡಿರುವ ಇನ್ನೋರ್ವ ಪೈಲೆಟ್ ಚಿಕಿತ್ಸೆ ಪಡೆಯುತ್ತಿದ್ದಾರೆ.