ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ದ್ವಿತೀಯ ಪಿಯುಸಿಯ 2022-23ನೇ ಸಾಲಿನ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟಿಸಲಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸೋಮವಾರ ಅಂತಿಮ ವೇಳಾಪಟ್ಟಿ ಪ್ರಕಟಿಸಿದೆ.
ಮಾರ್ಚ್ 9, 2023ರಿಂದ ಮಾರ್ಚ್ 29ರ ತನಕ ಪರೀಕ್ಷೆಗಳು ನಡೆಯಲಿವೆ. ಯಾವ ವಿಷಯದ ಪರೀಕ್ಷೆ ಯಾವ ದಿನ ಅನ್ನೋದು ಇಲ್ಲಿದೆ ನೋಡಿ.
09-03-2023, ಗುರುವಾರ – ಕನ್ನಡ, ಅರೇಬಿಕ್
11-03-2023, ಶನಿವಾರ – ಗಣಿತ ಶಾಸ್ತ್ರ, ಶಿಕ್ಷಣ ಶಾಸ್ತ್ರ
13-03-2023, ಸೋಮವಾರ – ಅರ್ಥಶಾಸ್ತ್ರ
14-03-2023, ಮಂಗಳವಾರ – ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ
15-03-2023, ಬುಧವಾರ – ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
16-03-2023, ಗುರುವಾರ – ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
17-03-2023, ಶುಕ್ರವಾರ – ಮಾಹಿತಿ ತಂತ್ರಜ್ಞಾನ, ರಿಟೈಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಆಂಡ್ ವೆಲ್ ನೆಸ್
18-03-2023, ಶನಿವಾರ – ಭೂಗೋಶಶಾಸ್ತ್ರ, ಜೀವಶಾಸ್ತ್ರ
20-03-2023, ಸೋಮವಾರ – ಇತಿಹಾಸ, ಭೌತಶಾಸ್ತ್ರ
21-03-2023, ಮಂಗಳವಾರ – ಹಿಂದಿ
23-03-2023, ಗುರುವಾರ – ಇಂಗ್ಲೀಷ್
25-03-2023 ಶನಿವಾರ – ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
27-03-2023, ಸೋಮವಾರ – ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ
29-03-2023, ಬುಧವಾರ – ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ