ಶಿವಾನಂದ ಪಾಟೀಲ ನಿಧನಕ್ಕೆ ಕುಮಾರಸ್ವಾಮಿ ಸಂತಾಪ

179

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಜಿಲ್ಲೆಯ ಸಿಂದಗಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶಿವಾನಂದ ಪಾಟೀಲ ಸೋಮಜಾಳ ಅವರ ಅಕಾಲಿಕ ನಿಧನಕ್ಕೆ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಎಚ್.ಡಿ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ. ಟ್ವೀಟ್ ಮೂಲಕ ಅಗಲಿದ ತಮ್ಮ ಪಕ್ಷದ ಮುಖಂಡನಿಗೆ ಸಂತಾಪ ಸೂಚಿಸಿದ್ದಾರೆ. ಅವರ ಟ್ವೀಟ್ ವಿವರ ಇಲ್ಲಿದೆ.

ಜನವರಿ 18ರಂದು ಇಡೀ ದಿನ ಅವರು ನನ್ನೊಂದಿಗೆ ಸಿಂದಗಿ ಕ್ಷೇತ್ರದಲ್ಲಿ ಪಂಚರತ್ನ ರಥಯಾತ್ರೆಯಲ್ಲಿ ಪಾಲ್ಗೊಂಡಿದ್ದರು. ಮರುದಿನ ಯಾತ್ರೆಯೊಂದಿಗೆ ನನ್ನನ್ನು ಆತ್ಮೀಯವಾಗಿ ದೇವರ ಹಿಪ್ಪರಗಿ ಕ್ಷೇತ್ರಕ್ಕೆ ಬೀಳ್ಕೊಟ್ಟಿದ್ದರು. ನಿನ್ನೆ ಮಧ್ಯಾಹ್ನವೂ ಮತ್ತೆ ನಾಗಠಾಣ ಕ್ಷೇತ್ರದ ಯಾತ್ರೆಯಲ್ಲಿ ಭಾಗವಹಿಸಿದ್ದರು.

ಸೇನೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ ನಿವೃತ್ತಿ ಪಡೆದಿದ್ದ ಶ್ರೀ ಪಾಟೀಲರು, ಸಮಾಜ ಸೇವೆಯ ಅದಮ್ಯ ಹಂಬಲ ಹೊಂದಿದ್ದರು. ಅತ್ಯುತ್ತಮ ಸಂಘಟನಾ ಶಕ್ತಿ, ಕ್ರಿಯಾಶೀಲತೆ ಹೊಂದಿದ್ದ ಅವರು ಪರಿಚಯವಾದ ಅಲ್ಪಕಾಲದಲ್ಲಿಯೇ ನನಗೆ ಅತ್ಯಂತ ಆತ್ಮೀಯರಾಗಿದ್ದರು. ಶ್ರೀ ಶಿವಾನಂದ ಪಾಟೀಲರ ಅಗಲಿಕೆ ನನಗೆ ವೈಯಕ್ತಿಕವಾಗಿ ಅತೀವ ದುಃಖ ಉಂಟು ಮಾಡಿದೆ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ.




Leave a Reply

Your email address will not be published. Required fields are marked *

error: Content is protected !!