ಮಲೆಮಹದೇಶ್ವರ ಬೆಟ್ಟದಲ್ಲಿ ಪ್ರವಾಸಿ ಬಸ್ ಪಲ್ಟಿ

371

ಪ್ರಜಾಸ್ತ್ರ ಸುದ್ದಿ

ಚಾಮರಾಜನಗರ: ಚಾಲಕನ ನಿಯಂತ್ರಣ ತಪ್ಪಿ ಮಲೆಮಹದೇಶ್ವರ ಬೆಟ್ಟದ 2ನೇ ತಿರುವಿನಲ್ಲಿ ಪ್ರವಾಸಿ ಬಸ್ ವೊಂದು ಪಲ್ಟಿಯಾದ ಘಟನೆ ಬುಧವಾರ ನಡೆದಿದೆ. ಇದರಿಂದಾಗಿ 15ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.

ಗಾಯಗೊಂಡವರನ್ನು ಬೆಟ್ಟದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

ಗುಜರಾತ್ ಮೂಲದ ಸುಮಾರು 50 ಪ್ರವಾಸಿಗರು ತಮಿಳುನಾಡಿನಿಂದ ಪಲಾರ್ ಮಾರ್ಗವಾಗಿ ಮಲೆಮಹದೇಶ್ವರ ಬೆಟ್ಟಕ್ಕೆ ಬರುತ್ತಿದ್ದ ಸಂದರ್ಭದಲ್ಲಿ ಈ ಅನಾಹುತ ಸಂಭವಿಸಿದೆ.




Leave a Reply

Your email address will not be published. Required fields are marked *

error: Content is protected !!