ಪ್ರಜಾಸ್ತ್ರ ಸುದ್ದಿ
ಹುಬ್ಬಳ್ಳಿ: ವಸತಿ ಸಚಿವ ವಿ.ಸೋಮಣ್ಣ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ನಗರದಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ವಿ.ಸೋಮಣ್ಣ ಕಾಂಗ್ರೆಸ್ ಸೇರುವ ಪ್ರಶ್ನೆಯೇ ಇಲ್ಲ. ನಾನು ಅವರೊಂದಿಗೆ ಮಾತನಾಡಿದ್ದೇನೆ ಎಂದಿದ್ದಾರೆ.
ಅವರು ನನ್ನ ಜೊತೆ ಸಂಪರ್ಕದಲ್ಲಿದ್ದಾರೆ. ಅವರೊಂದಿಗೆ ಮಾತನಾಡಿ ಸ್ಪಷ್ಟಪಡಿಸಿದ್ದೇನೆ. ಇನ್ನು ಸಂಸದೆ ಸುಮಲತಾ ಅವರು ನಮಗೆ ಮೊದಲಿನಿಂದಲೂ ಬೆಂಬಲ ನೀಡಿದ್ದಾರೆ. ಮಾರ್ಚ್ 12ರಂದು ಮಂಡ್ಯ ಭೇಟಿಯ ಬಳಿಕ ಧಾರವಾಡಕ್ಕೆ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ. ಐಐಟಿ ಕಟ್ಟಡ, ರಾಜ್ಯ ಹಾಗೂ ಕೇಂದ್ರದ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ ಅಂತಾ ಹೇಳಿದರು.