ಪ್ರಜಾಸ್ತ್ರ ಸುದ್ದಿ
ಕಲಬುರಗಿ: ಆನ್ಲೈನ್ ಆಟದ ಹುಚ್ಚಿನಿಂದಾಗಿ ಹಣ ಕಳೆದುಕೊಂಡ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ದೇವಿ ನಗರದ ನಿವಾಸದಲ್ಲಿ ಪ್ರವೀಣ್ ಪಾಟೀಲ(20) ಅನ್ನೋ ಯುವಕ ನೇಣಿಗೆ ಶರಣಾಗಿದ್ದಾನೆ.
ಖಾಸಗಿ ಕಾಲೇಜಿನಲ್ಲಿ ಬಿ.ಇ ವಿದ್ಯಾಭ್ಯಾಸ ಮಾಡುತ್ತಿದ್ದ ಪ್ರವೀಣ್, ಆನ್ಲೈನ್ ಆಟಕ್ಕಾಗಿ ಬೆಟ್ಟಿಂಗ್ ಕಟ್ಟುತ್ತಿದ್ದ. ಇದರಿಂದಾಗಿ ಸಾಕಷ್ಟು ಸಾಲ ಮಾಡಿಕೊಂಡಿದ್ದ. ಸಾಲು ತೀರಿಸಲು ಸಾಧ್ಯವಾಗಿದೆ. ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ನೇಣು ಹಾಕಿಕೊಂಡಿದ್ದಾನೆ. ಚಿತ್ತಾಪುರ ತಾಲೂಕಿನ ಸುಲಹಳ್ಳಿ ಗ್ರಾಮದ ನಿವಾಸಿಯಾಗಿದ್ದಾನೆ.