ಹಿರಿಯರ ರಾಷ್ಟ್ರೀಯ ಕ್ರೀಡಾಕೂಟ-2023

367

ಪ್ರಜಾಸ್ತ್ರ ಸುದ್ದಿ

ಧಾರವಾಡ: ಇಲ್ಲಿನ ಆರ್.ಎನ್ ಶೆಟ್ಟಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕರ್ನಾಟಕ ಓಪನ್ ನ್ಯಾಷನಲ್ ಮಾಸ್ಟರ್ಸ್ ಗೇಮ್ಸ್-2023 ಟೂರ್ನಿಯಲ್ಲಿ ಗಂಗವ್ವ ಮಲ್ಲಪ್ಪ ಬೆಳಗಾವಿ(67) ಪ್ರಥಮ ಸ್ಥಾನ ಗಳಿಸುವ ಮೂಲಕ ಚಿನ್ನದ ಪದಕ ಗೆದ್ದಿದ್ದಾರೆ.

300 ಮೀಟರ್ ಓಟದಲ್ಲಿ ಸ್ಪರ್ಧಿಸಿದ ಗಂಗವ್ವ ಮಲ್ಲಪ್ಪ ಬೆಳಗಾವಿ ಎಲ್ಲರನ್ನು ಹಿಂದಿಕ್ಕಿ ಗೋಲ್ಡ್ ಮೆಡಲ್ ಪಡೆದಿದ್ದಾರೆ. ಇವರ ಸಾಧನೆಗೆ ಕುಟುಂಬಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ.

ಮಾಸ್ಟರ್ಸ್ ಗೇಮ್ಸ್ ಅಸೋಷಿಯೇಷನ್ ಆಫ್ ಕರ್ನಾಟಕ, ಪ್ಯಾನ್ ಇಂಡಿಯಾ ಮಾಸ್ಟರ್ಸ್ ಗೇಮ್ಸ್ ಫೆಡರೇಷನ್, ಧಾರವಾಡ ಜಿಲ್ಲಾ ಮಾಸ್ಟರ್ಸ್ ಗೇಮ್ಸ್ ಅಸೋಷಿಯೇಷನ್ ವತಿಯಿಂದ ನವೆಂಬರ್ 4 ಹಾಗೂ 5ರಂದು ಇಲ್ಲಿನ ಆರ್.ಎನ್ ಶೆಟ್ಟಿ ಸ್ಟೇಡಿಯಂನಲ್ಲಿ ಒಳಾಂಗಣ ಹಾಗೂ ಹೊರಾಂಗಣ ಕ್ರೀಡಾಕೂಟ ಆಯೋಜಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!