ಪ್ರಜಾಸ್ತ್ರ ಸುದ್ದಿ
ಜಮ್ಮು ಕಾಶ್ಮೀರ್: ಜಮ್ಮು ಮತ್ತು ಕಾಶ್ಮೀರಕ್ಕೆ ಮಂಗಳವಾರ ಪ್ರಧಾನಿ ಮೋದಿ ಭೇಟಿ ನೀಡಿ, 32 ಸಾವಿರ ಕೋಟಿ ರೂಪಾಯಿ ವೆಚ್ಚದ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದರು.
ನಗರದ ಮೌಲಾನಾ ಆಜಾದ್ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ, ಶಿಕ್ಷಣ, ರೈಲು, ರಸ್ತೆ, ವಿಮಾನಯಾನ, ಪೆಟ್ರೋಲಿಯಂ, ಆರೋಗ್ಯ ಸೇರಿದಂತೆ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದರು.
ಇದೆ ವೇಳೆ ಪ್ರಧಾನಿ ಮೋದಿ, ಸರ್ಕಾರಿ ಸೇವೆಗೆ ನೇಕವಾದ 1,500 ಜನರಿಗೆ ನೇಮಕಾತಿ ಆದೇಶ ನೀಡಿದರು. ಜಮ್ಮು ಮತ್ತು ಕಾಶ್ಮೀರ್ ಲೆಫ್ಟಿನೆಂಟ್ ಗರ್ವನರ್ ಮನೋಜ್ ಸಿನ್ಹಾ ಪ್ರಧಾನಿಯವರನ್ನು ಸನ್ಮಾನಿಸಿದರು.