ಪ್ರಜಾಸ್ತ್ರ ಸಿನಿಮಾ ಡೆಸ್ಕ್
ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ದ್ವಾರಕೀಶ್(81) ಇಂದು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಮಂಗಳವಾರ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಓರ್ವ ಕಾಮಿಡಿ ನಟ 50 ಸಿನಿಮಾಗಳನ್ನು ನಿರ್ಮಾಣ ಮಾಡಿರುವುದು ವಿಶ್ವ ಸಿನಿ ಜಗತ್ತಿನಲ್ಲಿಯೇ ದಾಖಲೆಯಾಗಿದೆ. ವರನಟ ಡಾ.ರಾಜಕುಮಾರ್, ಸಾಹಸಿಂಹ ಡಾ.ವಿಷ್ಣುವರ್ಧನ್, ರೆಬಲ್ ಸ್ಟಾರ್ ಡಾ.ಅಂಬರೀಶ್ ಸೇರಿದಂತೆ ಅನೇಕ ಸ್ಟಾರ್ ನಟರೊಂದಿಗೆ ಅಭಿನಯ, ಸಿನಿಮಾ ನಿರ್ಮಾಣ ಮಾಡಿದ್ದಾರೆ.
ಕನ್ನಡ ಚಿತ್ರರಂಗದಲ್ಲಿ ಸಿಂಗಾಪುರದಲ್ಲಿ ಕಳ್ಳಾ ಕುಳ್ಳ ಎನ್ನುವ ಸಿನಿಮಾ ಮಾಡುವ ಮೂಲಕ ಮೊದಲ ಬಾರಿಗೆ ವಿದೇಶದಲ್ಲಿ ಚಿತ್ರೀಕರಣಗೊಂಡ ಹೆಗ್ಗಳಿಕೆ ಪಡೆದಿದೆ. ಸಾಕಷ್ಟು ಹಿಟ್ ಸಿನಿಮಾಗಳನ್ನು ನೀಡಿದ ದ್ವಾರಕೀಶ್ ನಿಧನಕ್ಕೆ ಕನ್ನಡ ಚಿತ್ರರಂಗದವರು, ಅಭಿಮಾನಿಗಳು, ಹಿತೇಷಿಗಳು ಸಂತಾಪ ಸೂಚಿಸಿದ್ದಾರೆ.