ಪ್ರಜಾಸ್ತ್ರ ಸುದ್ದಿ
ಮುಂಬೈ: ನಟಿ ಶಿಲ್ಪಾ ಶೆಟ್ಟಿ ಪತಿ, ಉದ್ಯಮಿ ರಾಜ್ ಕುಂದ್ರಾಗೆ ಸಂಬಂಧಿಸಿದ 98 ಕೋಟಿ ರೂಪಾಯಿ ಆಸ್ತಿಯನ್ನು ಇಡಿ ಅಧಿಕಾರಿಗಳು ಗುರುವಾರ ಜಪ್ತಿ ಮಾಡಿದ್ದಾರೆ. ಹಣ ಅಕ್ರಮವಾಗಿ ವರ್ಗಾವಣೆ ಆರೋಪದ ಮೇಲೆ ಈ ದಾಳಿ ನಡೆದಿದೆ.
ಮುಂಬೈನ ಜುಹುನರಲ್ಲಿ ಫ್ಲಾಟ್, ಪುಣೆಯಲ್ಲಿರುವ ಬಂಗಲೆ, ಈಕ್ವಿಟಿ ಷೇರ್ ಗಳನ್ನು ಜಪ್ತಿ ಮಾಡಲಾಗಿದೆ ಎಂದು ತಿಳಿಸಲಾಗಿದೆ. ಬಿಟ್ ಕಾಯಿನ್ ಗಳ ಮೂಲಕ ಹೂಡಿಕೆದಾರರ ಹಣ ವಂಚಿಸಿದ ಆರೋಪ ಕೇಳಿ ಬಂದಿದೆ.
285 ಬಿಟ್ ಕಾಯಿನ್ ಗಳನ್ನು ಹೊಂದಿದ್ದು, ಇವುಗಳ ಮೌಲ್ಯ ಬರೋಬ್ಬರಿ 150 ಕೋಟಿಗಿಂತಲೂ ಹೆಚ್ಚು ಎಂದು ಹೇಳಲಾಗುತ್ತಿದೆ.