ಜಮಖಂಡಿ: ಚಾಲಕನ ನಿಯಂತ್ರಣ ತಪ್ಪ ಟ್ರ್ಯಾಕ್ಟರ್ ಪಲ್ಟಿಯಾಗಿ, ಮೀನಾಕ್ಷಿ ಬಸವರಾಜು ಪರುತಪಾದಿ ಎಂಬುವವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇವರು ಮರೆಗುದ್ದಿ ಗ್ರಾಮ ಪಂಚಾಯ್ತಿಯ ಅಧ್ಯಕ್ಷೆಯಾಗಿದ್ದಾರೆ ಅಂತಾ ತಿಳಿದು ಬಂದಿದೆ. ಇನ್ನುಳಿದವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಂಬಂಧಿಕರೊಬ್ಬರ ದೇವರ ಕಾರ್ಯಕ್ರಮಕ್ಕೆ ಹೋಗುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ಪಿಎಸ್ ಐ ಬಾಲದಂಡಿ ಭೇಟಿ ನೀಡಿದ್ದು, ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.