ಆರೋಪಿಗಳ ಬಂಧನ: ಸಚಿವ ಪರಮೇಶ್ವರ್

172

ಪ್ರಜಾಸ್ತ್ರ ಸುದ್ದಿ

ತುಮಕೂರು: ಸಾಲದ ಕುಣಿಕೆಗೆ ಸಿಲುಕಿ ಒಂದೇ ಕುಟುಂಬದ ಐವರು ಆತ್ಮಹತ್ಯೆ ಪ್ರಕರಣ ಸಂಬಂಧ ಜಿಲ್ಲಾಸ್ಪತ್ರೆಗೆ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು.

 ಈ ವೇಳೆ ಮಾತನಾಡಿದ ಅವರು, ಮೃತ ಕರೀಬ್ ಸಾಬ್ ಡೆತ್ ನೋಟ್ ನಲ್ಲಿ ಬರೆದ ಐವರನ್ನು ವಶಕ್ಕೆ ಪಡೆಯಲಾಗಿದೆ. ಬಡ್ಡಿ ವ್ಯವಹಾರಕ್ಕೆ ಜೀವಗಳು ಬಲಿಯಾಗಿವೆ ಎಂದು ಜನರು ಹೇಳುತ್ತಿದ್ದು, ಇದನ್ನು ಗಂಭೀರವಾಗಿ ತೆಗೆದುಕೊಂಡು ಸೂಕ್ತ ಕಾನೂನು ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ. ತನಿಖೆಯ ಬಳಿಕ ಎಲ್ಲವೂ ತಿಳಿದು ಬರಬಲಿದೆ ಎಂದರು.

ಈ ವೇಳೆ ಶಾಸಕ ಜಿ.ಬಿ ಜ್ಯೋತಿಗಣೇಶ್, ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯ್ತಿ ಸಿಇಓ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಪಾಲಿಕೆ ಆಯುಕ್ತರು ಉಪಸ್ಥಿತರಿದ್ದರು.
Leave a Reply

Your email address will not be published. Required fields are marked *

error: Content is protected !!