ಶ್ರೀ ಆದಿಶೇಷ ಸಂಸ್ಥಾನ ಹಿರೇಮಠದ 28ನೇ ಜಾತ್ರಾ ಮಹೋತ್ಸವ

122

ಪ್ರಜಾಸ್ತ್ರ ಸುದ್ದಿ

ಸಿಂದಗಿ: ಭಗವಂತನ ಸೇವೆಯನ್ನು ನಿಸ್ವಾರ್ಥ ಭಾವದಿಂದ ಮಾಡಿದಾಗ ಮಾತ್ರ ಆ ದೇವರು ಒಳ್ಳೆಯ ಮಾರ್ಗ ತೋರುತ್ತಾನೆ ಎಂದು ತಹಶೀಲ್ದಾರ್ ಪ್ರದೀಪಕುಮಾರ ಹಿರೇಮಠ ಹೇಳಿದರು. ಪಟ್ಟಣದ ಬಸ್‌ಡಿಪೋ ಹತ್ತಿರದ ಶ್ರೀ ಆದಿಶೇಷ ಸಂಸ್ಥಾನ ಹಿರೇಮಠದಲ್ಲಿ ಶ್ರೀ ಆದಿಶೇಷ ಸಂಸ್ಥಾನ ಹಿರೇಮಠದ 28ನೇ ಜಾತ್ರಾ ಮಹೋತ್ಸವ-ಧರ್ಮಸಭೆ ಕಾರ್ಯಕ್ರಮ ಹಾಗೂ ಯಡಿಯೂರು ಶ್ರೀ ಸಿದ್ದಲಿಂಗೇಶ್ವರ ಪುರಾಣ ಪ್ರವಚನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಅತಿಥಿ ಡಾ.ವಿಜಯಕುಮಾರ ವಾರದ ಮಾತನಾಡಿ, ನಮ್ಮ ಈ ಬದುಕು ನೀರಿನ ಮೇಲಿನ ಗುಳ್ಳೆ ಇದ್ದ ಹಾಗೆ. ಆಧ್ಯಾತ್ಮಿಕ ಜೀವನ ಕೌಶಲ್ಯಗಳ ಬಗ್ಗೆ ಇಂದಿನ ಪೀಳಿಗೆಯಲ್ಲಿ ಅರಿವು ಮೂಡಿಸುವುದು ಅವಶ್ಯಕ ಎಂದರು. ಮಾದನ್ ಹಿಪ್ಪರಗಾ ಶ್ರೀಮಠದ ಶಾಂತವೀರ ಶಿವಾಚಾರ್ಯರು ಆಶೀರ್ವದಿಸಿದರು. ದಿವ್ಯ ಸಾನಿಧ್ಯವನ್ನು ನಾಲವಾರ ಶ್ರೀಮಠದ ಶಿವಯೋಗಿ ಡಾ.ಚಂದ್ರಶೇಖರ ಸ್ವಾಮಿಗಳು ವಹಿಸಿದ್ದರು. ಕಾರ್ಯಕ್ರಮದ ನೇತೃತ್ವವನ್ನು ಸಿಂದಗಿ ಆದಿಶೇಷ ಶ್ರೀಮಠದ ನಾಗರತ್ನ ರಾಜಯೋಗಿ ವೀರರಾಜೇಂದ್ರ ಸ್ವಾಮಿಗಳು ವಹಿಸಿಕೊಂಡಿದ್ದರು.

ಕಾರ್ಯಕ್ರಮದಲ್ಲಿ ಪಂಚಮಸಾಲಿ ಸಮಾಜದ ತಾಲೂಕಾಧ್ಯಕ್ಷ ಎಂ.ಎ ಹಂಗರಗಿ, ಕಸಾಪ ತಾಲೂಕಾಧ್ಯಕ್ಷ ಶಿವಾನಂದ ಬಡಾನೂರ, ಸತೀಶ ಬಿರಾದಾರ, ಭೋಜಪಗೌಡ ಬಿರಾದಾರ, ಗೊಲ್ಲಾಳಪ್ಪ ಬಗಲಿ, ಪ್ರವಚನಕಾರ ವೆ.ಮೂ.ಸಿದ್ದಯ್ಯ ಶಾಸ್ತ್ರಿಗಳು, ಸಂಗೀತಗಾರ ಶಾಂತಲಿಂಗ ಹೊನ್ನಕಿರಣಗಿ, ತಬಲಾವಾದಕ ಆಕಾಶ ಹೈದ್ರಾ, ಮಹಾಂತೇಶ ನಾಗೋಜಿ, ಚಂದ್ರಶೇಖರ ನಾಗರಬೆಟ್ಟ, ಮಲ್ಲನಗೌಡ ಪಾಟೀಲ ಇಬ್ರಾಹಿಂಪೂರ, ವಿದ್ಯಾ ಚೌಕಿಮಠ, ಸಂಗನಗೌಡ ಪಾಟೀಲ ಅಗಸಬಾಳ, ಸುರೇಶ ಭಜಂತ್ರಿ ಸೇರಿದಂತೆ ಶ್ರೀಮಠದ ಭಕ್ತರು ಇದ್ದರು. ಪೂಜಾ ಹಿರೇಮಠ ನಿರೂಪಿಸಿದರು. ಪಂಡಿತ ಯಂಪೂರೆ ಸ್ವಾಗತಿಸಿದರು. ಮಾಹಾಂತೇಶ ನೂಲಾನವರ ಪ್ರಾಸ್ತಾವಿಕವಾಗಿ ಮಾತನಾಡಿದರು.




Leave a Reply

Your email address will not be published. Required fields are marked *

error: Content is protected !!