ಆಪ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಮುಖ್ಯಮಂತ್ರಿ ಚಂದ್ರು

307

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಹಿರಿಯ ನಟ, ಮಾಜಿ ಶಾಸಕ ಮುಖ್ಯಮಂತ್ರಿ ಚಂದ್ರು ಅವರನ್ನು ಆಪ್ ಪಕ್ಷದ ಜನ ಸಂಪರ್ಕ ಹಾಗೂ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಪಕ್ಷದ ರಾಜ್ಯ ಚುನಾವಣಾ ಉಸ್ತುವಾರಿ ದಿಲೀಪ್ ಪಾಂಡೆ ನಿರ್ದೇಶನದಂತೆ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಆದೇಶಿಸಿದ್ದಾರೆ.

ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಚಂದ್ರು, ದೆಹಲಿ ಹಾಗೂ ಪಂಜಾಬ್ ನಲ್ಲಿ ಆಪ್ ಸರ್ಕಾರ ಹಲವು ಜನಪರ ಯೋಜನೆಗಳನ್ನು ತಂದಿದೆ. ಇದನ್ನು ಕರ್ನಾಟಕದ ಜನತೆಗೆ ತಿಳಿಸಿ ಇಲ್ಲಿಯೂ ಆಪ್ ಸರ್ಕಾರ ಬರುವಂತೆ ಮಾಡಬೇಕಿದೆ. ಹೀಗಾಗಿ ಜನಸಂಪರ್ಕ ಹಾಗೂ ಪ್ರಚಾರ ಸಮಿತಿ ಕೆಲಸ ಮಾಡಲಿದೆ. ನನ್ನ ಮೇಲೆ ವಿಶ್ವಾಸವಿಟ್ಟು ಹೊಸ ಜವಾಬ್ದಾರಿ ನೀಡಿರುವ ಪಕ್ಷದ ಮುಖಂಡರಿಗೆ ಧನ್ಯವಾದಗಳು ಎಂದರು.




Leave a Reply

Your email address will not be published. Required fields are marked *

error: Content is protected !!