ವಿಜಯಪುರ ಹೆಸ್ಕಾಂ ಅಧಿಕಾರಿ ಮನೆ ಮೇಲೆ ಎಸಿಬಿ ದಾಳಿ

324

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಕರ್ನಾಟಕದ ಹಲವು ಜಿಲ್ಲೆಗಳ 9 ಅಧಿಕಾರಿಗಳ ಮನೆಗಳ ಮೇಲೆ ಗುರುವಾರ ಬೆಳಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇದರಲ್ಲಿ ವಿಜಯಪುರದ ಹೆಸ್ಕಾಂ ಕಚೇರಿಯ ಎಇಇ ಸಿದ್ದರಾಮ ಮಲ್ಲಿಕಾರ್ಜುನ ಬಿರಾದಾರ ಸಹ ಒಬ್ಬರಾಗಿದ್ದಾರೆ.

ನಗರದ ಸುಕೊನ್ ಲೇಔಟ್ ನಲ್ಲಿರುವ ಗಂಗಾ ನಿವಾಸದ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅತಿಯಾದ ಅಕ್ರಮ ಹಾಗೂ ಭ್ರಷ್ಟಾಚಾರದ ಆರೋಪದ ಹಿನ್ನೆಲೆಯಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಹಣ, ಚಿನ್ನಾಭರಣ, ಆಸ್ತಿ ಪತ್ರಗಳ ಪರಿಶೀಲನೆ ನಡೆಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!