ವರ್ಷದ ಬಳಿಕ ಹಿರಿಯ ಐಪಿಎಸ್ ಅಧಿಕಾರಿ ರಾಜೀನಾಮೆ ಅಂಗೀಕಾರ

219

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಅವರ ಸ್ವಯಂ ನಿವೃತ್ತಿ ಬಯಸಿ ಸಲ್ಲಿಸಿದ್ದ ರಾಜೀನಾಮೆಯನ್ನು ಸರ್ಕಾರ ಅಂಗೀಕರಿಸಿದೆ. ಈ ಮೂಲಕ ರಾಜೀನಾಮೆ ಸಲ್ಲಿಸಿದ ಒಂದು ವರ್ಷದ ಬಳಿಕ ಅವರ ರಾಜೀನಾಮೆ ಅಂಗೀಕಾರವಾಗಿದೆ.

ಬೆಂಗಳೂರು ಪೊಲೀಸ್ ಆಯುಕ್ತರು ಸೇರಿದಂತೆ ಇಲಾಖೆಯ ವಿವಿಧ ಉನ್ನತ ಹುದ್ದೆಗಳಲ್ಲಿ ಸೇವೆ ಸಲ್ಲಿಸಿರುವ ಭಾಸ್ಕರ್ ರಾವ್ ಅವರು ಸ್ವಯಂ ನಿವೃತ್ತಿ ಬಯಸಿ ಕಳೆದ ಒಂದು ವರ್ಷದ ಹಿಂದೆ ರಾಜೀನಾಮೆ ಸಲ್ಲಿಸಿದ್ದರು. ಆದರೆ, ಸರ್ಕಾರ ಅವರನ್ನು ಸೇವೆಯಿಂದ ಅಧಿಕೃತವಾಗಿ ಬಿಡುಗಡೆ ಮಾಡಿರಲಿಲ್ಲ. ಈಗ ಸೇವೆಯಿಂದ ಬಿಡುಗಡೆಗೊಳಿಸಿದೆ.

ಭಾಸ್ಕರ್ ರಾವ್ ರಾಜೀನಾಮೆ ಸಲ್ಲಿಸಿದ ಬಳಿಕ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸಮ್ಮುಖದಲ್ಲಿ ದೆಹಲಿಯಲ್ಲಿ ಆಪ್ ಪಕ್ಷಕ್ಕೆ ಸೇರ್ಪಡೆಯಾದರು. ಇದರೊಂದಿಗೆ ಮತ್ತೊಬ್ಬ ಹಿರಿಯ ಪೊಲೀಸ್ ಅಧಿಕಾರಿ ರಾಜಕೀಯ ಪ್ರವೇಶ ಮಾಡಿದರು.




Leave a Reply

Your email address will not be published. Required fields are marked *

error: Content is protected !!