ಏ.12ರಿಂದ ನಾಮಪತ್ರ ಸ್ವೀಕಾರ: ಡಿಸಿ ಭೂಬಾಲನ್

50

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಲೋಕಸಭಾ ಚುನಾವಣೆ 2024ರ ನಾಮಪತ್ರಗಳನ್ನು ಏಪ್ರಿಲ್ 12 ರಿಂದ 19 ರವರೆಗೆ ಸ್ವೀಕರಿಸಲಾಗುವುದು ಎಂದು ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಯಾದ ಟಿ.ಭೂಬಾಲನ್ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಚುನಾವಣೆ ಅಧಿಸೂಚನೆ ಕುರಿತು ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ನಾಮಪತ್ರಗಳನ್ನು ಸರ್ಕಾರಿ ರಜಾ ದಿನಗಳನ್ನು ಹೊರತುಪಡಿಸಿ ಬೆಳಗ್ಗೆ 11ಗಂಟೆಯಿಂದ ಮಧ್ಯಾಹ್ನ 3ರವರೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸ್ಥಾಪಿಸಲಾದ ಚುನಾವಣಾಧಿಕಾರಿಗಳ ಕಾರ್ಯಾಲಯದಲ್ಲಿ ಸ್ವೀಕರಿಸಲಾಗುವುದು ಎಂದರು.

ನಾಮಪತ್ರ ಸಲ್ಲಿಸಲು ಏಪ್ರಿಲ್ 19 ಕೊನೆಯ ದಿನ. ಏ.20ರಂದು ನಾಮಪತ್ರಗಳ ಪರಿಶೀಲನೆ. ಏ.22ರಂದು ನಾಮಪತ್ರ ಹಿಂಪಡೆಯಲು ಕಾಲಾವಕಾಶವಿರುತ್ತದೆ. ಮೇ 7ರಂದು ಮತದಾನ ನಡೆಯಲಿದ್ದು, ಜೂ.4 ರಂದು ಮತ ಎಣಿಕೆ ನಡೆಯಲಿದೆ. ಜೂ.6ರಂದು ನೀತಿ ಸಂಹಿತೆ ಮುಕ್ತಾಯಗೊಳ್ಳಲಿದೆ ಅಂತಾ ಹೇಳಿದರು.

ಜಿಲ್ಲೆಯಲ್ಲಿ ಏ.10ರ ಅಂತ್ಯಕ್ಕೆ 19,43,566 ಮತದಾರರಿದ್ದು 9,86,778 ಪುರುಷ ಹಾಗೂ 9,56,578 ಮಹಿಳಾ ಮತ್ತು 210 ಇತರೆ ಮತದಾರರಿದ್ದಾರೆ. ಈ ಪೈಕಿ 43,468 ಯುವ ಮತದಾರರು, 21,764 ವೀಕಲಚೇತನ, 1,874 ಸೇವಾ ಮತದಾರರಿದ್ದಾರೆ. ಪಾರದರ್ಶಕ ಹಾಗೂ ನ್ಯಾಯ ಸಮ್ಮತ ಚುನಾವಣಾ ನಡೆಸುವ ದೃಷ್ಟಿಯಿಂದ ವಿಧಾನಸಭಾ ಮತಕ್ಷೇತ್ರವಾರು ಒಟ್ಟು 167 ಸೆಕ್ಟರ್ ಅಧಿಕಾರಿಗಳು, 72 ಪ್ಲಾಯಿಂಡ್ ಸ್ವ್ಕಾಡ್, 87 ಸ್ಟೆಟಿಕ್ ಸರ್ವಲೈನಸ್ ಟೀಮ್, 24 ವಿಡೀಯೋ ಸರ್ವಲೈನಸ್ ಟೀಮ್, 8 ವಿಡೀಯೋ ವಿವ್ಹಿಂಗ್ ಟೀಮ್, 8 ಅಕೌಂಟಿಂಗ್ ಟೀಮ್ ರಚನೆ ಮಾಡಲಾಗಿದೆ ಎಂದು ತಿಳಿಸಿದರು.




Leave a Reply

Your email address will not be published. Required fields are marked *

error: Content is protected !!