ಶಿವಮೊಗ್ಗದಲ್ಲಿ ಭೀಕರ ಅಪಘಾತಕ್ಕೆ ನಾಲ್ವರ ಸಾವು

233

ಪ್ರಜಾಸ್ತ್ರ ಸುದ್ದಿ

ಸಾಗರ: ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ತಾಳಗುಪ್ಪ ಹತ್ತಿರ ಖಾಸಗಿ ಬಸ್ ಹಾಗೂ ಓಮ್ನಿ ನಡುವೆ ಭೀಕರ ಅಪಘಾತ ಸಂಭವಿಸಿ ನಾಲ್ವರು ಸಾವನ್ನಪ್ಪಿದ್ದಾರೆ. ಮೂವರ ಸ್ಥಿತಿ ಗಂಭೀರವಾಗಿದೆ. ಮೃತರು ದಾವಣಗೆರೆಯ ಚಿನ್ನಗಿರಿ ಮೂಲದವರೆಂದು ತಿಳಿದು ಬಂದಿದೆ.

ಜೋಗ ಜಲಪಾತ ನೋಡಲು ಹೊರಟಿದ್ದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ. ಘಟನೆ ಬಳಿಕ ಖಾಸಗಿ ಬಸ್ ಚಾಲಕ ಪರಾರಿಯಾಗಿದ್ದಾನೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




Leave a Reply

Your email address will not be published. Required fields are marked *

error: Content is protected !!