ಲಾರಿ-ಓಮ್ನಿ ಅಪಘಾತ: ಮಗು ಸೇರಿ 6 ಜನರ ಸಾವು

73

ಪ್ರಜಾಸ್ತ್ರ ಸುದ್ದಿ

ಚೆನ್ನೈ: ತಿರುಚ್ಚಿ ಜಿಲ್ಲೆಯ ತಿರುವಾಸಿ ಹತ್ತಿರದ ತಿರುಚ್ಚಿ-ಸೇಲಂ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ನಸುಕಿನಜಾವ ಲಾರಿ ಹಾಗೂ ಓಮ್ನಿ ನಡುವೆ ಭೀಕರ ಅಪಘಾತ ಸಂಭವಿಸಿದೆ. ಇದರಿಂದಾಗಿ ಮಗು ಸೇರಿ 6 ಜನರು ಮೃತಪಟ್ಟ ದಾರುಣ ಘಟನೆ ನಡೆದಿದೆ.

ಅಪಘಾತದಲ್ಲಿ ಮೂವರಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಓಮ್ನಿಯಲ್ಲಿ 9 ಜನರು ಪ್ರಯಾಣಿಸುತ್ತಿದ್ದರು. ಘಟನೆಯಲ್ಲಿ ಪುಟ್ಟ ಮಗು, ಓರ್ವ ಮಹಿಳೆ ಹಾಗೂ ನಾಲ್ವರು ಪುರುಷರ ಮೃತಪಟ್ಟಿದ್ದಾರೆ ಎಂದು ಎಸ್ಪಿ ಸಜಿತ್ ಕುಮಾರ್ ತಿಳಿಸಿದ್ದಾರೆ. ಮೃತರ ಗುರುತು ಪತ್ತೆ ಹೆಚ್ಚುವ ಕಾರ್ಯ ನಡೆದಿದೆ.
Leave a Reply

Your email address will not be published. Required fields are marked *

error: Content is protected !!