ಜವರಾಯನ ಅಟ್ಟಹಾಸ…

434

ಬೆಂಗಳೂರು: ಬೆಂಗಳೂರಿನ ಯಲಹಂಕ ಬಳಿಯ ಕೋಗಿಲು ಕ್ರಾಸ್ ಬಳಿ ನಿನ್ನೆ ಮಧ್ಯರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಇದರಿಂದಾಗಿ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ. ಮಧ್ಯರಾತ್ರಿ 12.30ರ ಸುಮಾರಿಗೆ ಆ್ಯಂಬುಲೆನ್ಸ್ ಹಾಗೂ ವ್ಯಾಗನಾರ್ ಕಾರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಈ ದುರ್ಘಟನೆ ನಡೆದಿದೆ.

ಪಶ್ಚಿಮ ಬಂಗಳ ಮೂಲದವರಾಗಿದ್ದ ಇವರೆಲ್ಲ, ಸಂಬಂಧಿಕರನ್ನ ಭೇಟಿಯಾಗಿಲು ಬೆಂಗಳೂರಿಗೆ ಆಗಮಿಸಿದ್ದರು. ಈ ವೇಳೆ ಈ ದುರಂತ ನಡೆದಿದೆ. ಸಾವನ್ನಪ್ಪಿದವರಲ್ಲಿ ಇಬ್ಬರು ಪುರುಷರು ಹಾಗೂ ಮೂವರು ಮಹಿಳೆಯರಿದ್ದಾರೆ. ಶವಗಳನ್ನ ಯಲಹಂಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಬಗ್ಗೆ ಪ್ರಕರಣ ದಾಖಲಾಗಿದೆ.




Leave a Reply

Your email address will not be published. Required fields are marked *

error: Content is protected !!