ಬೆಳ್ಳಂಬೆಳಗ್ಗೆ ಅಪಘಾತ ಮೂವರ ಸಾವು

342

ಯಾದಗಿರಿ: ನಿಂತಿದ್ದ ಲಾರಿಗೆ ಆಟೋ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಮೂವರು ಸಾವನ್ನಪ್ಪಿರುವ ಘಟನೆ ನಗರದ ಗಡೇಸೊಗರ್ ಗೇಟ್ ಬಳಿ ನಡೆದಿದೆ. ಆಟೋ ಯಾದಗಿರಿಯಿಂದ ವಡೇಗೇರಾದ ಕಡೆ ತೆರಳಲುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ನಿಂತಿದ್ದ ಲಾರಿಗೆ ಗುದ್ದಿದೆ.

ಮೃತರು ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ಹಲಕಟ್ಟಿ ಗ್ರಾಮದ ಸಿದ್ದಮ್ಮ, ರಮೇಶ ಹಾಗೂ ವಡೇಗೇರಾ ತಾಲೂಕಿನ ಹಾಲಗೇರಾ ಗ್ರಾಮದ ಪಾಷಾ ಎಂದು ಗುರುತಿಸಲಾಗಿದೆ. ಇದೇ ವೇಳೆ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!