ಅಪಘಾತಕ್ಕೆ ಕೋಲ್ಹಾರದಲ್ಲಿ ಮದ್ಯದ ಗಾಡಿ ಪಲ್ಟಿ

352

ಕೋಲ್ಹಾರ: ಅಪರಿಚಿತ ವಾಹನವೊಂದು ಡಿಕ್ಕಿಯಾದ ಪರಿಣಾಮ ಟಾಟಾ ಎಸ್ ವಾಹನ ಪಲ್ಟಿಯಾಗಿದೆ. ಇದ್ರಿಂದಾಗಿ ವಾಹನದಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಮದ್ಯ ಮಣ್ಣು ಪಾಲಾಗಿದೆ.

ವಿಜಯಪುರ ಜಿಲ್ಲೆಯ ಕೋಲ್ಹಾರ ರಸ್ತೆ ಮಧ್ಯದಲ್ಲಿ ಈ ಘಟನೆ ನಡೆದಿದ್ದು, ಟಾಟಾ ಏಸ್ ನಲ್ಲಿದ್ದ ಸುಮಾರು 7 ಲಕ್ಷ ಮೌಲ್ಯದ ಮದ್ಯ ಮಣ್ಣುಪಾಲಾಗಿದೆ ಎಂದು ತಿಳಿದು ಬಂದಿದೆ. ಅಪರಿಚಿತ ವಾಹನದ ಚಾಲಕ ಗಾಡಿ ಸಮೇತ ಪರಾರಿಯಾಗಿದ್ದಾನೆ. ಹೈವೈ ಪೊಲೀಸ್ರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಮನಗೂಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




Leave a Reply

Your email address will not be published. Required fields are marked *

error: Content is protected !!