Search

ಅಪಘಾತದಲ್ಲಿ ಪ್ಯಾಟೆ ಹುಡ್ಗೀರ ಹಳ್ಳಿ ಲೈಫು ವಿನ್ನರ್ ಸಾವು

549

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕನ್ನಡದ ಖ್ಯಾತ ರಿಯಾಲಿಟಿ ಶೋ ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫ್ ಸೀಸನ್ 4ರ ವಿನ್ನರ್ ಮೆಬೀನಾ ಮೈಕಲ್, ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

ಬೆಂಗಳೂರಿನಲ್ಲಿ ನೆಲೆಸಿದ್ದ ಸೋಮವಾರಪೇಟೆಯ ಐಗೂರು ಮೂಲದ ಯುವತಿ, ಇಂದು ಬೆಳಗ್ಗೆ ಸ್ವಗ್ರಾಮಕ್ಕೆ ಹೋಗುವಾಗ ಬೆಳ್ಳೂರು ಬಳಿ ರಸ್ತೆ ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಚಿತ್ರರಂಗದಲ್ಲಿ ಬೆಳೆಯಬೇಕು ಅನ್ನೋ ಕನಸು ಕಂಡಿದ್ದ ಯವತಿ ಅಪಘಾತದಲ್ಲಿ ಸಾವನ್ನಪ್ಪಿರುವುದು ನಿಜಕ್ಕೂ ದುರಂತ.

ಕಾರಿನಲ್ಲಿದ್ದ ಇನ್ನಿಬ್ಬರಿಗೆ ಗಾಯಗಳಾಗಿವೆ. ಅವರನ್ನ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾಸನ ಕಡೆಯಿಂದ ಯೂಟರ್ನ್ ತೆಗೆದುಕೊಳ್ತಿದ್ದ ಟ್ರ್ಯಾಕ್ಟರ್ ಹಾಗೂ ಕಾರ್ ನಡುವೆ ಅಪಘಾತ ಸಂಭವಿಸಿದೆ. ಬೆಳ್ಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.




Leave a Reply

Your email address will not be published. Required fields are marked *

error: Content is protected !!