ಲಾರಿಗಳೆರಡು ಮುಖಾಮುಖಿ ಡಿಕ್ಕಿ: ಇಬ್ಬರ ಸಾವು

332

ಹಾಸನ: ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಸಾವನ್ನಪ್ಪಿರುವ ಘಟನೆ ಆಲೂರು ತಾಲೂಕಿನ ಸಿಂಗಾಪುರ ಗ್ರಾಮದ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಅಪಘಾತ ಸಂಭವಿಸಿದೆ.

ಸರಕು ಸಾಗಾಟ ಮಾಡ್ತಿದ್ದ ಲಾರಿಗಳು ಅತಿ ವೇಗವಾಗಿ ಬಂದು ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಗಾಡಿಗಳಲ್ಲಿ ಸಿಲುಕಿದ್ದ ಮೃತದೇಹಗಳನ್ನ ಹೊರ ತೆಗೆಯಲು ಸ್ಥಳೀಯರು ಹಾಗೂ ಪೊಲೀಸ್ರು ಹರಸಾಹಸ ಪಡಬೇಕಾಯ್ತು. ಲಾರಿಗಳನ್ನ ವಶಕ್ಕೆ ಪಡೆಯಲಾಗಿದ್ದು, ಈ ಸಂಬಂಧ ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




Leave a Reply

Your email address will not be published. Required fields are marked *

error: Content is protected !!