ಯುವತಿ ಮೇಲೆ ಆ್ಯಸಿಡ್ ಎರಚಿದ ಯುವಕ

414

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಯುವತಿಯೊಬ್ಬಳ ಮೇಲೆ ಯುವಕನೊಬ್ಬ ಆ್ಯಸಿಡ್ ಎರೆಚಿದ ಘಟನೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪ್ರೀತಿ ವಿಚಾರವಾಗಿ ಯುವತಿ ಹಿಂದೆ ಬಿದ್ದಿದ್ದ ಯುವಕ ಈ ರೀತಿ ಮಾಡಿದ್ದಾನೆ ಎಂದು ಪೊಲೀಸರು ಹೇಳುತ್ತಿದ್ದಾರೆ.

ಗಾಯಗೊಂಡಿರುವ ಯುವತಿಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಯುವತಿಯ ಹೇಳಿಕೆ ಪಡೆದು ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಮುಂದಿನ ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!