ಪ್ರಜಾಸ್ತ್ರ ಸಿನಿಮಾ ಡೆಸ್ಕ್
ಸ್ಯಾಂಡಲ್ ವುಡ್ ದೂದ್ ಪೇಡಾ ನಟ ದಿಗಂತ್ ಸಮ್ಮರ್ ಸಾಲ್ಟ್ ಹೊಡೆಯುವಾಗ ಗಾಯ ಮಾಡಿಕೊಂಡಿದ್ದಾರೆ. ಹೀಗಾಗಿ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಕೆಲ ಮೂಲಗಳ ಪ್ರಕಾರ ಕುತ್ತಿಗೆಗೆ ಬಲವಾದ ಪೆಟ್ಟು ಬಿದ್ದಿದೆ ಎನ್ನಲಾಗುತ್ತಿದೆ. ಕುಟುಂಬಸ್ಥರ ಮೂಲಗಳ ಪ್ರಕಾರ ಬೆನ್ನುಮೂಳೆಗೆ ಪೆಟ್ಟು ಬಿದ್ದಿದೆ. ಮೆಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ದಿಗಂತ್ ಪತ್ನಿ ನಟಿ, ಐಂದ್ರಿತಾ ರೈ ತಂದೆ ತಿಳಿಸಿದ್ದಾರೆ.
ಪತ್ನಿಯೊಂದಿಗೆ ಗೋವಾಗೆ ತೆರಳಿದ್ದ ದಿಗಂತ್, ಬೀಚ್ ನಲ್ಲಿ ಸಮ್ಮರ್ ಸಾಲ್ಟ್ ಹೊಡೆಯುವಾಗ ಬಿದ್ದಿದ್ದಾರೆ. ಹೀಗಾಗಿ ಅವರನ್ನು ಏರ್ ಲಿಫ್ಟ್ ಮೂಲಕ ಬೆಂಗಳೂರಿಗೆ ಕರೆದುಕೊಂಡು ಬರಲಾಗಿದೆ.