ದ್ವಾರಕೀಶ್ ನಿಧನಕ್ಕೆ ಸಿಎಂ, ಡಿಸಿಎಂ, ಮಾಜಿ ಸಿಎಂಗಳಿಂದ ಸಂತಾಪ

99

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಮಾಜಿ ಸಿಎಂಗಳಾದ ಯಡಿಯೂರಪ್ಪ, ಕುಮಾರಸ್ವಾಮಿ ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ.

ಸಾಮಾಜಿಕ ಜಾಲತಾಣವಾದ ಎಕ್ಸ್, ಫೇಸ್ ಬುಕ್ ಗಳಲ್ಲಿ ಅವರ ಸಿನಿ ಬದುಕಿನ ಕುರಿತು ಮೆಲಕು ಹಾಕುವುದರೊಂದಿಗೆ, ಕುಟುಂಬಸ್ಥರಿಗೆ ಸಾಂತ್ವಾನ ಹೇಳಲಾಗಿದೆ.

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಸಚಿವರಾದ ಕೆ.ಸುಧಾಕರ್, ಸಿ.ಎನ್ ಅಶ್ವತ್ಥನಾರಾಯಣ್ ಸೇರಿದಂತೆ ರಾಜಕೀಯ ಕ್ಷೇತ್ರದ ಹಲವು ಗಣ್ಯರು ನುಡಿ ನಮನ ಸಲ್ಲಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!