ಅಪ್ಪು ನಿಧನ: ಆತ್ಮಹತ್ಯೆಗೆ ಯತ್ನಿಸಿದ ಅಭಿಮಾನಿ

233

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನಿಧನದಿಂದ ಮನನೊಂದು ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ವಿಜಯಪುರ ಜಿಲ್ಲೆ ದೇವರಹಿಪ್ಪರಗಿ ಪಟ್ಟಣದಲ್ಲಿ ನಡೆದಿದ್ದು, 24 ವರ್ಷದ ಶರಣಪ್ಪ ಅಮೋಘಿ ಬಿಸನಾಳ ಅನ್ನೋ ಯುವಕ, 40 ಡಯಾಬಿಟಿಸ್ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾನೆ.

ಆತ್ಮಹತ್ಯೆಗೆ ಯತ್ನಿಸಿದ ಯುವಕನನ್ನು ವಿಜಯಪುರದ ಬಿಎಲ್ ಡಿಇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ದೇವರಹಿಪ್ಪರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ‌.




Leave a Reply

Your email address will not be published. Required fields are marked *

error: Content is protected !!