ಪುನೀತ್ ಅಂತಿಮ ದರ್ಶನ ಪಡೆದ ಗಣ್ಯರು

207

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಕ್ಟೋಬರ್ 29ರ ಮಧ್ಯಾಹ್ನ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅವರ ಅಂತಿಮ ದರ್ಶನಕ್ಕೆ ನಗರದ ಕಂಠೀರವ ಕ್ರೀಡಾಂಗಣದಲ್ಲಿ ವ್ಯವಸ್ಥೆ ಮಾಡಲಾಗಿದೆ. ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಅದರಂತೆ ಗಣ್ಯರು ಅಂತಿಮ ದರ್ಶನ ಪಡೆಯುತ್ತಾರೆ.

ಇಂದು ಬೆಳಿಗ್ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಶುಕ್ರವಾರ ನಿಧನರಾದ ನಟ ಪುನೀತ್ ರಾಜಕುಮಾರ್ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗೃಹ ಸಚಿವ ಆರಗ ಜ್ಞಾನೇಂದ್ರ ಸೇರಿ ಅನೇಕರಿದ್ದರು.




Leave a Reply

Your email address will not be published. Required fields are marked *

error: Content is protected !!