ಬ್ರೇಕಿಂಗ್ ನ್ಯೂಸ್
Search

ಮರಾಠಿ ನಟ ರವೀಂದ್ರ ಮಹಾಜನಿ ಮೃತದೇಹ ಪತ್ತೆ

174

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಮರಾಠಿ ಸಿನಿ ಜಗತ್ತಿನ ಹಿರಿಯ ನಟ ರವೀಂದ್ರ ಮಹಾಜನಿ ಅವರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪುಣೆಯ ಮಾವಲ್ ತಾಲೂಕಿನ ಅಂಬಿ ಗ್ರಾಮದ ಬಾಡಿಗೆ ಮನೆಯಲ್ಲಿ ಒಂಟಿಯಾಗಿ ವಾಸವಾಗಿದ್ದರು.

ಮನೆಯಿಂದ ಕಟ್ಟ ವಾಸನೆ ಬರುತ್ತಿದ್ದಾಗ ನೆರೆಹೊರೆಯವರು ಪೊಲೀಸರಿಗೆ ಫೋನ್ ಮಾಡಿದ್ದಾರೆ. ಆಗ ಅವರು ಮೃತಪಟ್ಟ ವಿಷಯ ಬೆಳಕಿಗೆ ಬಂದಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ ಕೆಲ ತಿಂಗಳ ಹಿಂದೆ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಹೀಗಾಗಿ ಹೆಚ್ಚು ತಿರುಗಾಡಲು ಆಗುತ್ತಿರಲಿಲ್ಲ.

ಸ್ನಾನ ಮಾಡಿ ಬಟ್ಟೆ ಬದಲಾಯಿಸುವ ವೇಳೆ ಈ ಘಟನೆ ನಡೆದಿರಬಹುದು ಎನ್ನಲಾಗುತ್ತಿದೆ. ನಟ ಗಶ್ಮೀರ್ ಮಹಾಜನಿ ಇವರ ಮಗನಾಗಿದ್ದಾರೆ. ಓರ್ವ ಹಿರಿಯ ನಟನ ಬದುಕು ಇಷ್ಟೊಂದು ಕೆಟ್ಟ ರೀತಿಯಲ್ಲಿ ಅಂತ್ಯವಾಗಿದ್ದು ನಿಜಕ್ಕೂ ದುರಂತವೇ ಸರಿ.




Leave a Reply

Your email address will not be published. Required fields are marked *

error: Content is protected !!