ದರ್ಶನ್ ಜೊತೆಗೆ ಸಂಜು ಬಾಬಾ

153

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ನಟ ದರ್ಶನ್ ಕಾಟೇರ ಚಿತ್ರದ ಯಶಸ್ಸಿನ ಅಲೆಯಲ್ಲಿದ್ದಾರೆ. ಅವರ ಸಿನಿ ಕರಿಯರ್ ನಲ್ಲಿ ಕಾಟೇರ ಹೊಸ ಇಮೇಜ್ ತಂದು ಕೊಟ್ಟಿದೆ. ಈಗ ತಮ್ಮ ಮುಂದಿನ ಚಿತ್ರಕ್ಕೆ ಭರ್ಜರಿ ತಯಾರಿ ನಡೆಸಿದ್ದು, ಕರಿಯ ಬಳಿಕ ಜೋಗಿ ಪ್ರೇಮ್ ಮತ್ತೊಮ್ಮೆ ಆಕ್ಷನ್ ಕಟ್ ಹೇಳುತ್ತಿದ್ದಾರೆ.

ನಟ ದರ್ಶನ್ ಚಿತ್ರದಲ್ಲಿ ಬಾಲಿವುಡ್ ನಟ ಸಂಜಯ್ ದತ್ ಕಾಣಿಸಿಕೊಳ್ಳುತ್ತಿರುವ ಬಗ್ಗೆ ಮಾತುಗಳು ಕೇಳಿ ಬರುತ್ತಿವೆ. ಇದಕ್ಕೆ ಸಾಕ್ಷಿ ಎಂಬಂತೆ ಕೆವಿಎನ್ ಪ್ರೊಡಕ್ಷನ್ ಮುಖ್ಯಸ್ಥ ಕೆ.ವೆಂಕಟ್ ನಾರಾಯಣ್ ತಮ್ಮ ಸೋಷಿಯಲ್ ಮೀಡಿಯಾ ಅಕೌಂಟ್ ನಲ್ಲಿ ಒಂದಿಷ್ಟು ಫೋಟೋ ಹಂಚಿಕೊಂಡಿದ್ದಾರೆ.

ನಟರಾದ ದರ್ಶನ್, ಸಂಜಯ್ ದತ್, ನಿರ್ದೇಶಕ ಜೋಗಿ ಪ್ರೇಮ್, ನಟಿ ರಕ್ಷಿತಾ ಪ್ರೇಮ್ ಹಾಗೂ ತಾವು ಜೊತೆಗಿರುವ ಫೋಟೋ ಹಂಚಿಕೊಳ್ಳುವ ಮೂಲಕ ದರ್ಶನ್ ಎದುರು ಸಂಜು ಬಾಬಾ ವಿಲನ್ ಆಗಿ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಮಾತಿಗೆ ಪುಷ್ಟಿ ನೀಡುತ್ತಿದೆ.




Leave a Reply

Your email address will not be published. Required fields are marked *

error: Content is protected !!