ಪ್ರಜಾಸ್ತ್ರ ಸಿನಿಮಾ ಡೆಸ್ಕ್
ಸ್ಯಾಂಡಲ್ ವುಡ್ ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್ ಆರೋಗ್ಯದಲ್ಲಿ ಏರುಪೇರು ಆಗಿದೆ ಎಂದು ಮುಂಜಾನೆಯಿಂದ ಎಲ್ಲೆಡೆ ಕೇಳಿ ಬರುತ್ತಿದೆ. ಇದು ಸುಳ್ಳು ಎಂದು ಹೇಳಲಾಗಿದೆ. ಅವರ ಆರೋಗ್ಯದಲ್ಲಿ ಯಾವುದೇ ಏರುಪೇರು ಆಗಿಲ್ಲ. ಸಾಮಾನ್ಯ ಆರೋಗ್ಯ ತಪಾಸಣೆ ನಡೆಸಿದ್ದಾರೆ ಎಂದು ಶಕ್ತಿಧಾಮದ ಖಜಾಂಚಿ ಸುಮನಾ ತಿಳಿಸಿದ್ದಾರೆ.
ಮೈಸೂರಿನ ಜೆಎಸ್ಎಸ್ ಆಸ್ಪತ್ರೆಯಲ್ಲಿ ಸಾಮಾನ್ಯ ತಪಾಸಣೆ ಮಾಡಿಸಿಕೊಂಡಿದ್ದಾರೆ. ನಂತರ ಅವರು ಶಕ್ತಿಧಾಮಕ್ಕೆ ತೆರಳಿ ಮಕ್ಕಳೊಂದಿಗೆ ಕಾಲ ಕಳೆಯುತ್ತಿದ್ದಾರೆ ಎಂದು ತಿಳಿಸಿದ್ದಾರೆ.