ಪ್ರಜಾಸ್ತ್ರ ಸಿನಿಮಾ ಡೆಸ್ಕ್
ಬಾಲಿವುಡ್ ನಟ ಶ್ರೇಯಸ್ ತಲ್ಪಡೆಗೆ ಲಘು ಹೃದಯಾಘಾತವಾಗಿದೆ. ವೆಲ್ ಕಮ್ ಟು ದಿ ಜಂಗಲ್ ಸಿನಿಮಾದ ಶೂಟಿಂಗ್ ಮುಗಿಸಿಕೊಂಡು ಮನೆಗೆ ವಾಪಸ್ ಆಗುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿದೆ.
ಮುಂಬೈನ ಅಂಧೇರಿ ಪ್ರದೇಶದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾತ್ರಿಯೆ ಅವರಿಗೆ ಆಂಜಿಯೋಪ್ಲಾಸ್ಟಿ ಮಾಡಲಾಗಿದೆ. ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು, ಪತ್ನಿ ಸಹ ತಿಳಿಸಿದ್ದಾರೆ. ಕೆಲ ದಿನಗಳಲ್ಲೇ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ತಿಳಿದು ಬಂದಿದೆ.