ಜಿಮ್ ನಲ್ಲಿ ವರ್ಕೌಟ್ ಮಾಡುವಾಗ ಯುವ ನಟ ನಿಧನ

210

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಹಿಂದಿ ಕಿರುತೆರೆಯ ಜನಪ್ರಿಯ ನಟ ಹಾಗೂ ಹಲವಾರ ರಿಯಾಲಿಟಿ ಶೋಗಳಲ್ಲಿ ಕಾಣಿಸಿಕೊಂಡಿರುವ ಸಿದ್ಧಾಂತ್ ಸೂರ್ಯವಂಶಿ, ಜಿಮ್ ನಲ್ಲಿ ವರ್ಕೌಟ್ ಮಾಡುವಾಗ ಶುಕ್ರವಾರ ನಿಧನರಾಗಿದ್ದಾರೆ. ಹೃದಯಾಘಾತದಿಂದ ಸಿದ್ಧಾಂತ್ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.

46 ವರ್ಷದ ನಟ ಸಿದ್ಧಾಂತ್, ಕಸುತಿ ಜಿಂದಗಿ ಕೇ, ಕುಸುಮ್, ಕೃಷ್ಣ ಅರ್ಜುನ, ಜಿದ್ದಿ ದಿಲ್ ಅನ್ನೋ ಶೋಗಳಲ್ಲಿ ನಟಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಜಿಮ್ ನಲ್ಲಿ ವರ್ಕೌಟ್ ಮಾಡುವಾಗ ಅಕಾಲಿಕವಾಗಿ ನಿಧನವಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿರುವುದು ಆತಂಕ ಮೂಡಿಸಿದೆ.




Leave a Reply

Your email address will not be published. Required fields are marked *

error: Content is protected !!