ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಹಿಂದುತ್ವದ ವಿಚಾರಕ್ಕೆ ಸಂಬಂಧಿಸಿದಂತೆ ನಟ, ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಅವರನ್ನು ಬಂಧಿಸಲಾಗಿದೆ. ಶೇಷಾದ್ರಿಪುರ ಠಾಣೆ ಪೊಲೀಸರು ಬಂಧಿಸಿದ್ದು, ಕೋರ್ಟ್ ಗೆ ಹಾಜರು ಪಡಿಸಲಿದ್ದಾರೆ. ಹಿಂದೂಪರ ಸಂಘಟನೆ ನೀಡಿದ ದೂರಿನ ಆಧಾರದ ಮೇಲೆ ಐಪಿಸಿ ಸಕ್ಷನ್ 295ಎ, 505ಬಿ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ. ರಾಮನು ರಾವಣನನ್ನು ಸೋಲಿಸಿ ಅಯೋಧ್ಯೆಗೆ ಹಿಂದಿರುಗಿದಾಗ ಭಾರತೀಯ ರಾಷ್ಟ್ರ ಶುರುವಾಯಿತು ಅನ್ನೋದು ಸುಳ್ಳು. ಬಾಬರಿ ಮಸೀದಿ ರಾಮ ಜನ್ಮ ಭೂಮಿ ಸುಳ್ಳು, ಈಗ ಉರಿಗೌಡ, ನಂಜೇಗೌಡರು ಟಿಪ್ಪುವನ್ನು ಕೊಂದರು ಅನ್ನೋದು ಸುಳ್ಳು. ಹಿಂದುತ್ವವನ್ನು ಸತ್ಯದಿಂದ ಸೋಲಿಸಬಹುದು. ಸತ್ಯವೇ ಸಮಾನತ ಎಂದು ಟ್ವೀಟ್ ಮೂಲಕ ಬರೆದುಕೊಂಡಿದ್ದರು.
ನಟ ಚೇತನ್ ಬರಹವನ್ನು ಖಂಡಿಸಿ ಹಿಂದೂಪರ ಸಂಘಟನೆಗಳು ಶೇದ್ರಿಪುರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇತ್ತೀಚೆಗೆ ಒಂದಲ್ಲ ಒಂದು ಕಾರಣಕ್ಕೆ ಚೇತನ್ ವಿವಾದವನ್ನು ಮೈಮೇಲೆ ಎಳೆದುಕೊಳ್ಳುತ್ತಿದ್ದಾರೆ.