ಪ್ರಜಾಸ್ತ್ರ ಸಿನಿಮಾ ಡೆಸ್ಕ್
ತಮಿಳು ನಟ ವಿಷ್ಣು ಮಂಚು ನಟನೆಯ ಭಕ್ತ ಕಣ್ಣಪ್ಪ ಚಿತ್ರದ ಶೂಟಿಂಗ್ ವೇಳೆ ಡ್ರೋನ್ ತಗುಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ನ್ಯೂಜಿಲೆಂಡ್ ನಲ್ಲಿ ನಡೆಯುತ್ತಿರುವ ಶೂಟಿಂಗ್ ವೇಳೆ ಅನಾಹುತ ನಡೆದಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಷ್ಣು ಮಂಚು ಈ ಚಿತ್ರವನ್ನು ದೊಡ್ಡ ಮಟ್ಟದಲ್ಲಿ ತರಬೇಕೆಂದು ಪ್ರಯತ್ನಿಸುತ್ತಿದ್ದಾರೆ. ಹೀಗಾಗಿ ಭಕ್ತ ಕಣ್ಣಪ್ಪ ಚಿತ್ರದಲ್ಲಿ ಸ್ಯಾಂಡಲ್ ವುಡ್ ಸೆಂಚ್ಯುರಿ ಸ್ಟಾರ್ ಶಿವರಾಜಕುಮಾರ್, ಟಾಲಿವುಡ್ ಡಾರ್ಲಿಂಗ್ ಪ್ರಭಾಸ್, ಬಾಲಿವುಡ್ ನ ಅಕ್ಷಯ್ ಕುಮಾರ್, ಲೇಡಿ ಸೂಪರ್ ಸ್ಟಾರ್ ನಯನತಾರಾ ಕಾಣಿಸಿಕೊಳ್ಳುತ್ತಿದ್ದಾರೆ.