ಮದ್ಯಪಾನ ಸಂಯಮ ಮಂಡಳಿಗೆ ನಟಿ ಶ್ರುತಿ ಅಧ್ಯಕ್ಷೆ

303

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕರ್ನಾಟಕ ಮದ್ಯಪಾನ ಸಂಯಮ ಮಂಡಳಿಗೆ ನಟಿ ಶ್ರುತಿ ಅವರನ್ನ ನೇಮಕ ಮಾಡಲಾಗಿದೆ. ಈ ಮೂಲಕ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸ್ಥಾನದಿಂದ ಬದಲಾವಣೆ ಮಾಡಲಾಗಿದೆ.

ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸ್ಥಾನದಿಂದ ತಮ್ಮನ್ನ ಕೆಳಗೆ ಇಳಿಸಿದ್ದಕ್ಕೆ ಇಂದು ಬೆಳಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪನವರನ್ನ ಭೇಟಿಯಾಗಿ ಕೇಳಿದ್ರು. ಇದೀಗ ನಟಿ ಶ್ರುತಿಯನ್ನ ಮದ್ಯಪಾನ ಸಂಯಮ ಮಂಡಳಿಗೆ ಅಧ್ಯಕ್ಷರನ್ನ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

ಇನ್ನು ಕಾಪು ಸಿದ್ದಲಿಂಗಯ್ಯನವರನ್ನ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!