ಹಿರಿಯ ನಟಿ ಲೀಲಾವತಿ ನಿಧನ

206

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ(86) ಅವರು ಶುಕ್ರವಾರ ಸಂಜೆ ನಿಧನರಾಗಿದ್ದಾರೆ. ಕಳೆದ ಎರಡ್ಮೂರು ವಾರಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ನೆಲಮಂಗಲದ ಹತ್ತಿರ ಇರುವ ತೋಟದ ಮನೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

ಇಂದು ಆರೋಗ್ಯ ತೀವ್ರ ಏರುಪೇರಾದ ಕಾರಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ. ಇತ್ತೀಚೆಗೆ ಅವರನ್ನು ಚಿತ್ರರಂಗದ ಗಣ್ಯರು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದರು. ಮಗ ನಟ ವಿನೋದ್ ರಾಜ್ ಅವರನ್ನು ಅಗಲಿದ್ದಾರೆ.

ಕನ್ನಡ, ತಮಿಳು, ತೆಲುಗು, ಮಲಿಯಾಳಂ ಸೇರಿ 600 ಚಿತ್ರಗಳಲ್ಲಿ ನಟಿಸಿದ್ದಾರೆ. ಕನ್ನಡದಲ್ಲಿಯೇ ಬರೋಬ್ಬರಿ 400 ಚಿತ್ರಗಳಲ್ಲಿ ಬಣ್ಣ ಹಚ್ಚಿದ್ದಾರೆ.




Leave a Reply

Your email address will not be published. Required fields are marked *

error: Content is protected !!