ಶ್ರುತಿ ಹರಿಹರನ್ ಮೀ ಟೂ ಕೇಸ್ ಹೊಸ ಟ್ವಿಸ್ಟ್

157

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ನಟಿ ಶ್ರುತಿ ಹರಿಹರನ್ ಮೀ ಟೂ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಟ್ವಿಸ್ಟ್ ಸಿಕ್ಕಿದೆ. ಅದೇನು ಅಂದರೆ, 8ನೇ ಎಸಿಎಂಎಂ ಕೋರ್ಟ್ ನಟಿ ಹಾಗೂ ಪೊಲೀಸರಿಗೆ ನೋಟಿಸ್ ನೀಡಿದೆ. ಪೊಲೀಸರಿಗೆ ಸೂಕ್ತ ಸಾಕ್ಷಿ, ದಾಖಲೆಗಳನ್ನು ನೀಡುವಂತೆ ನಟಿಗೆ ನೋಟಿಸ್ ನೀಡಲಾಗಿದೆ.

2018ರಲ್ಲಿ ಬಹುಭಾಷಾ ನಟ ಅರ್ಜುನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಮೀ ಟೂ ಆರೋಪ ಮಾಡಿದ್ದರು. ಪ್ರಕರಣ ವಿಚಾರಣೆ ನಡೆಸಿದ ಪೊಲೀಸರು ಸೂಕ್ತ ಸಾಕ್ಷಿಗಳಿಲ್ಲವೆಂದು ಬಿ ರಿಪೋರ್ಟ್ ಸಲ್ಲಿಸಿದ್ದರು. ಇದನ್ನು ನಟಿ ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದರು.

ಇದೀಗ ಈ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದೆ. ಪ್ರಕರಣ ಸಂಬಂಧ ಸೂಕ್ತ ಸಾಕ್ಷಿಗಳನ್ನು ನೀಡುವಂತೆ ನಟಿಗೆ ನೋಟಿಸ್ ನೀಡಲಾಗಿದೆ.




Leave a Reply

Your email address will not be published. Required fields are marked *

error: Content is protected !!