ಅಪ್ಪುಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ

539

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಇತ್ತೀಚೆಗೆ ಹೃದಯಾಘಾತದಿಂದ ನಿಧನರಾದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿಯನ್ನು ಘೋಷಿಸಲಾಗಿದೆ. ಅರಮನೆ ಮೈದಾನದಲ್ಲಿ ನಡೆದ ಪುನೀತ್ ನಮನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದಾರೆ.

ಪುನೀತಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲು ಕಾನೂನು ಅಡ್ಡಿಗಳಿವೆ. ಹೀಗಾಗಿ ಅದನ್ನು ನೀಡಲಾಗಿಲ್ಲ. ಈ ಕಾರಣಕ್ಕೆ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಲಾಗಿದೆ ಎಂದರು. ಈ ವೇಳೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅಪಾರ ಸಂಖ್ಯೆಯ ಗಣ್ಯರು ಎದ್ದು ನಿಂತು ಚಪ್ಪಾಳೆ ತಟ್ಟಿದರು.




Leave a Reply

Your email address will not be published. Required fields are marked *

error: Content is protected !!