ಬ್ರಾಹ್ಮಣರ ಮಾಲೀಕತ್ವದ ಪತ್ರಿಕೆಗಳಿಗೆ ಜಾಹೀರಾತು: ಖರ್ಗೆ ಕಿಡಿ

145

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಬ್ರಾಹ್ಮಣರ ಒಡೆತನದಲ್ಲಿರುವ ಜಿಲ್ಲಾ ಹಾಗೂ ಪ್ರಾದೇಶಿಕ ಪತ್ರಿಕೆಗಳಿಗೆ ಎರಡು ಪುಟ ಜಾಹೀರಾತು ನೀಡುವ ಸರ್ಕಾರದ ಆದೇಶಕ್ಕೆ ಸಾಕಷ್ಟು ವಿರೋಧ ವ್ಯಕ್ತವಾಗಿದೆ. ಈ ಬಗ್ಗೆ ಕಾಂಗ್ರೆಸ್ ಮಾಜಿ ಸಚಿವ, ಶಾಸಕ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಖರ್ಗೆ, ನಾಗಪುರದ ಆದೇಶವನ್ನು ಚಾಚೂ ತಪ್ಪದೆ ಪಾಲಿಸುತ್ತಿರುವ ನಾಗಪುರದ ನಿಷ್ಠಾವಂತ ನೌಕರರಾಗಿದ್ದಾರೆ ಸಿಎಂ ಎಂದು ವಾಗ್ದಾಳಿ ನಡೆಸಿದ್ದಾರೆ. ಸಾರ್ವಜನಿಕರಿಂದಲೂ ಇದಕ್ಕೆ ವಿರೋಧ ವ್ಯಕ್ತವಾಗಿದೆ.

ಹಿಂದುಳಿದ, ಆರ್ಥಿಕವಾಗಿ ಶಕ್ತಿಯಿಲ್ಲದ ಸಮಾಜದಿಂದ ಬಂದು ಪತ್ರಿಕೆ ನಡೆಸುತ್ತಿರುವ ಎಸ್ಸಿ, ಎಸ್ಟಿ, ಹಿಂದುಳಿದ ವರ್ಗದವರಿಗೆ ಸರ್ಕಾರಿ ಜಾಹೀರಾತು ನೀಡಲಾಗುತ್ತಿದೆ. ಆದರೆ, ಬಲಿತ ಸಮುದಾಯದ ಪರವಾಗಿ ಕೆಲಸ ಮಾಡುತ್ತಿರುವ ಬಿಜೆಪಿ ಸರ್ಕಾರ ತಳಸಮುದಾಯಗಳ ವಿರೋಧಿ ಸರ್ಕಾರ ಎಂದು ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.




Leave a Reply

Your email address will not be published. Required fields are marked *

error: Content is protected !!