ಸಿಎಂ, ಡಿಸಿಎಂ ಭೇಟಿ ಬಳಿಕ ಕಾಂಗ್ರೆಸ್ ಸೇರ್ಪಡೆ ತೀರ್ಮಾನ: ಸಂಗಣ್ಣ ಕರಡಿ

62

ಪ್ರಜಾಸ್ತ್ರ ಸುದ್ದಿ

ಕೊಪ್ಪಳ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ವಂಚಿತ ಸಂಸದ ಸಂಗಣ್ಣ ಕರಡಿ, ಕಾಂಗ್ರೆಸ್ ಸೇರುವ ಕುರಿತು ಮಾತನಾಡಿದ್ದಾರೆ. ಮಂಗಳವಾರ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿಎಂ ಹಾಗೂ ಡಿಸಿಎಂ ಭೇಟಿಗೆ ಆತ್ಮೀಯರಾದ ಲಕ್ಷ್ಮಣ ಸವದಿ ವ್ಯವಸ್ಥೆ ಮಾಡಿದ್ದಾರೆ. ಅವರ ಭೇಟಿ ಬಳಿಕ ಕಾಂಗ್ರೆಸ್ ಸೇರ್ಪಡೆ ತೀರ್ಮಾನ ಮಾಡುತ್ತೇನೆ ಎಂದಿದ್ದಾರೆ.

ಕಾಂಗ್ರೆಸ್ ಸೇರ್ಪಡೆಯ ಬಳಿಕ ಯಾರೆಲ್ಲ ನನ್ನನ್ನು ನಿರ್ಲಕ್ಷ್ಯ ಮಾಡಿದ್ದಾರೆ ಎನ್ನುವುದನ್ನು ಹೇಳುತ್ತೇನೆ. ಜರ್ನಾಧನ್ ರೆಡ್ಡಿ ಬಿಟ್ಟು ಬೇರೆ ಯಾರೂ ನನ್ನ ಸಂಪರ್ಕದಲ್ಲಿ ಇಲ್ಲ ಎಂದರು.

ಕಾಂಗ್ರೆಸ್ ಅಭ್ಯರ್ಥಿ ರಾಜಶೇಖರ್ ಹಿಟ್ನಾಳ್, ಸಂಗಣ್ಣ ಕರಡಿ ಅವರ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದರು. ನಾಲ್ಕು ದಶಕಗಳಿಂದ ರಾಜಕೀಯದಲ್ಲಿರುವ ಸಂಗಣ್ಣ ಕರಡಿ ಅವರು ಕಾಂಗ್ರೆಸ್ ಸೇರಿದರೆ ದೊಡ್ಡ ಬಲ ಬರುತ್ತೆ ಎಂದಿದ್ದಾರೆ.




Leave a Reply

Your email address will not be published. Required fields are marked *

error: Content is protected !!