ಸುಗ್ರೀವಾಜ್ಞೆ ಮೂಲಕ ಕೃಷಿ ಕಾಯ್ದೆ ಜಾರಿಗೆಗೆ ಸರ್ಕಾರ ರೆಡಿ

346

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಸಾಕಷ್ಟು ವಿರೋಧದ ನಡುವೆಯೂ ಮೂರು ಕೃಷಿ ಕಾಯ್ದೆಗಳನ್ನ ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಸಚಿವ ಸಂಪುಟದಲ್ಲಿ ಒಪ್ಪಿಗೆ ಸೂಚಿಸಲಾಗಿದೆ. ರಾಜ್ಯ ವಿಧಾನಮಂಡಲ ಅಧಿವೇಶನದಲ್ಲಿ ಎಪಿಎಂಸಿ ಕಾಯ್ದೆ, ಭೂ ಸುಧಾರಣೆ ಕಾಯ್ದೆ ಹಾಗೂ ಕಾರ್ಮಿಕ ತಿದ್ದುಪಡಿ ಕಾಯ್ದೆಗೆ ಅನುಮೋದನೆ ನೀಡಲಾಗಿದೆ.

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮೂರು ಕಾಯ್ದೆಗಳನ್ನು ಸುಗ್ರೀವಾಜ್ಞೆ ಮೂಲಕ ತರುವ ಕುರಿತು ಚರ್ಚೆ ನಡೆಸಲಾಗಿದೆ. ಇದಕ್ಕೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸಿಕ್ಕಿದೆ. ಹೀಗಾಗಿ ರಾಜ್ಯ ಸರ್ಕಾರ ಈ ಕಾಯ್ದೆಗಳನ್ನು ಜಾರಿಗೆ ತರಲು ಮುಂದಾಗಿದೆ.




Leave a Reply

Your email address will not be published. Required fields are marked *

error: Content is protected !!