ಪ್ರಜಾಸ್ತ್ರ ಸುದ್ದಿ
ನವದೆಹಲಿ: ಎನ್ ಡಿಎ ಮೈತ್ರಿಕೂಟದಿಂದ ತಮಿಳುನಾಡಿನ ಪ್ರಾದೇಶಿಕ ಪಕ್ಷವಾದ ಎಐಎಡಿಎಂಕೆ ಪಕ್ಷ ಹೊರ ಬಂದಿದೆ. ಈ ಮೂಲಕ ಬಿಜೆಪಿ ಪಡೆಗೆ ಶಾಕ್ ನೀಡಿದೆ. ಲೋಕಸಭಾ ಚುನಾವಣೆ ಹೊತ್ತಿನಲ್ಲಿ ಒಗ್ಗಟ್ಟಿನ ಮಂತ್ರ ಜಪಿಸುವ ಸಂದರ್ಭದಲ್ಲಿ ಎನ್ ಡಿಎದಲ್ಲಿ ಒಡಕು ಶುರುವಾಗಿದೆ.
ಇಂದು ಅಧಿಕೃತವಾಗಿ ಎಐಎಡಿಎಂಕೆ ತನ್ನ ನಿರ್ಧಾರವನ್ನು ಘೋಷಣೆ ಮಾಡಿದೆ. ಇಂದು ನಡೆದ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರವನ್ನು ಘೋಷಿಸಲಾಗಿದೆ. ಹೀಗಾಗಿ ಚೆನ್ನೈನಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.