ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಮಾಜಿ ಸಚಿವ, ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಗೆ ಎಐಸಿಸಿಯಿಂದ ಕರೆ ಬಂದಿದೆ. ಹೀಗಾಗಿ ಇಂದು ಅವರು ದೆಹಲಿಗೆ ತೆರಳಲಿದ್ದಾರೆ.
ಜಮೀರ್ ಅಹ್ಮದ್ ಪಕ್ಷದ ಚಟುವಟಿಕೆಗಳಿಂದ ಅಂತರ ಕಾಯ್ದುಕೊಂಡ ಹಿನ್ನೆಲೆಯಲ್ಲಿ ಹೈಕಮಾಂಡ್ ಅವರನ್ನು ಕರೆದಿದೆ ಎಂದು ಹೇಳಲಾಗುತ್ತಿದೆ. ದೆಹಲಿಯಲ್ಲಿ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ್ ಅವರನ್ನು ಭೇಟಿಯಾಗಲು ಸೂಚಿಸಲಾಗಿದೆ.