ಬ್ರೇಕಿಂಗ್ ನ್ಯೂಸ್
Search

ಫೆಬ್ರವರಿಯಲ್ಲಿ ಕಲಬುರಗಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ

448

ಕಲಬುರಗಿ: 85 ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಕಲಬುರಗಿಯಲ್ಲಿ ನಡೆಯುತ್ತಿದೆ. ಇದರ ದಿನಾಂಕವನ್ನ ಸಾಹಿತ್ಯ ಪರಿಷತ್ ಅಧ್ಯಕ್ಷ ಮನು ಬಳಿಗಾರ ಅವರು ಘೋಷಣೆ ಮಾಡಿದ್ರು. ಫೆಬ್ರವರಿ 5 ರಿಂದ 7ರ ವರೆಗೆ ಮೂರು ದಿನಗಳ ಕಾಲ ಸಮ್ಮೇಳನ ನಡೆಯಲಿದೆ.

ಜಿಲ್ಲಾಧಿಕಾರಿ ಬಿ.ಶರತ ನೇತೃತ್ವದಲ್ಲಿ ಸಭೆ ನಡೆಸಿದ ಅವರು, ಕಲಬುರಗಿ ವಿಶ್ವ ವಿದ್ಯಾಲಯದಲ್ಲಿ ಸಮ್ಮೇಳನ ನಡೆಸಲು ದಿನಾಂಕ ಹಾಗೂ ಸ್ಥಳ ನಿಗದಿ ಮಾಡಿರುವ ಕುರಿತು ತಿಳಿಸಿದ್ರು. ಉತ್ತರ ಕರ್ನಾಟಕದಲ್ಲಿ ಪ್ರವಾಹ ಉಂಟಾದ ಪರಿಣಾಮ, ಡಿಸೆಂಬರ್ ನಲ್ಲಿ ನಡೆಯಬೇಕಿದ್ದ ಕನ್ನಡ ಸಾಹಿತ್ಯ ಸಮ್ಮೇಳನ ಫೆಬ್ರವರಿಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಅಂತಾ ಹೇಳಿದ್ರು.

1987ರಲ್ಲಿ ಸಂತ ಶರಣ ನಾಡಿನಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆದಿತ್ತು. 31 ವರ್ಷಗಳ ಬಳಿಕ ಮತ್ತೆ ಕಲ್ಯಾಣ ಕರ್ನಾಟಕದಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದೆ.




Leave a Reply

Your email address will not be published. Required fields are marked *

error: Content is protected !!