ಅಕ್ಕಮಹಾದೇವಿ ಮಹಿಳಾ ವಿವಿ ನೂತನ ಕುಲಪತಿ ನೇಮಕ

410

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯಕ್ಕೆ ನೂತನ ಕುಲಪತಿಗಳನ್ನ ನೇಮಕ ಮಾಡಲಾಗಿದೆ. ಪ್ರೊ.ಬಿ.ಕೆ ತುಳಸಿಮಾಲಾ ಅವರನ್ನ ಕುಲಪತಿಯಾಗಿ ರಾಜ್ಯಪಾಲ ವಜುಭಾಯಿ ವಾಲಾ ಅವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಮೈಸೂರು ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾಗಿರುವ ಪ್ರೊ.ತುಳಸಿಮಾಲಾ ಅವರು, ಪ್ರಸ್ತುತ ಬಳ್ಳಾರಿಯ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾನಿಲಯದ ಕುಲಸಚಿವರಾಗಿ ಕಾರ್ಯನಿರ್ವಹಣೆ ಮಾಡುತ್ತಿದ್ದಾರೆ. ಪ್ರೊ.ತುಳಸಿಮಾಲಾ ಅವರು ಅಧಿಕಾರ ವಹಿಸಿಕೊಂಡ ದಿನದಿಂದ ಮುಂದಿನ ನಾಲ್ಕು ವರ್ಷಗಳ ಕಾಲ ಹುದ್ದೆಯಲ್ಲಿ ಇರಲಿದ್ದಾರೆ ಎಂದು ರಾಜ್ಯಪಾಲರ ಆದೇಶದಲ್ಲಿ ತಿಳಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!