ಅನ್ಲೈನ್ ಮೂಲಕ ಅಕ್ಕ ವಿವಿ ಘಟಿಕೋತ್ಸವ: ಡಾ.ಓಂಕಾರ ಕಾಕಡೆ

353

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಕರೋನಾ ಹಾವಳಿಯಿಂದಾಗಿ ರಾಜ್ಯದ ಏಕೈಕ ಮಹಿಳಾ ವಿಶ್ವವಿದ್ಯಾಲಯವಾಗಿರುವ ಅಕ್ಕಮಹಾದೇವಿ ಮಹಿಳಾ ವಿವಿಯ 11ನೇ ಘಟಿಕೋತ್ಸವವನ್ನ ಆನ್ಲೈನ್ ಮೂಲಕ ಆಚರಿಸಲು ಸಿದ್ಧತೆ ನಡೆಸಲಾಗ್ತಿದೆ. ಈ ಸಂಬಂಧ ರಾಜ್ಯಪಾಲರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಸಭೆ, ಸಮಾರಂಭಗಳಿಗೆ ನಿರ್ಬಂಧ ಇರುವ ಹಿನ್ನೆಲೆಯಲ್ಲಿ ವಿಶ್ವವಿದ್ಯಾಲಯದ ಅಕ್ಕ ಟಿವಿ, ಗೂಗಲ್ ಮೀಟ್, ಫೇಸ್​ ಬುಕ್ ಲೈವ್ ಸೇರಿದಂತೆ ಹಲವು ಸಾಮಾಜಿಕ ತಾಣಗಳನ್ನ ಬಳಸಿಕೊಂಡು ಘಟಿಕೋತ್ಸವ ಆಚರಿಸಲಾಗುತ್ತಿದೆ. ರಾಜ್ಯಪಾಲ ವಜುಭಾಯಿ ವಾಲಾ ಅವರು ಆನ್ಲೈನ್ ಮೂಲಕ ಮುಖ್ಯಭಾಷಣ ಮಾಡಲಿದ್ದಾರೆ ಎಂದು ಪ್ರಭಾರಿ ಕುಲಪತಿ ಡಾ.ಓಂಕಾರ ಕಾಕಡೆ ತಿಳಿಸಿದ್ದಾರೆ.

ರಾಜ್ಯಪಾಲರ ಅನುಮತಿ ಪಡೆದು ಸೆಪ್ಟೆಂಬರ್ ಕೊನೆ ವಾರದಲ್ಲಿ ವಿವಿಯ ಅಂಬೇಡ್ಕರ್ ಸಭಾಭವನದಲ್ಲಿ ಕಾರ್ಯಕ್ರಮ ಆಯೋಜಿಸಲು ಸಿದ್ಧತೆ ಮಾಡಿಕೊಳ್ಳಲಾಗುವುದು. 72ಕ್ಕಿಂತ ಹೆಚ್ಚು ಬಂಗಾರದ ಪದಕ ವಿಜೇತೆಯರು, ವಿಐಪಿ, ವಿವಿಐಪಿಗಳು ಸೇರಿ 200 ರಿಂದ 250 ಜನರಿಗೆ ಮಾತ್ರ ಆಹ್ವಾನ ನೀಡಲಾಗಿದೆ. ಈ ಬಾರಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಇಬ್ಬರು ಮಹಿಳೆಯರಿಗೆ ಗೌರವ ಡಾಕ್ಟರೇಟ್ ನೀಡಲು‌ ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.




Leave a Reply

Your email address will not be published. Required fields are marked *

error: Content is protected !!