ಈಗ ಯಾವ ಸಭೆ ನಡೆಸಿ ಏನು ಉಪಯೋಗ?: ಹೆಚ್ಡಿಕೆ

304

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕೋವಿಡ್ 19ನೇ ಅಲೆ ವಿಚಾರಕ್ಕೆ ಸಂಬಂಧಿಸಿದಂತೆ ಏಪ್ರಿಲ್ 18ರ ಸಂಜೆ 4 ಗಂಟೆಗೆ ಸರ್ವಪಕ್ಷ ಸಭೆ ಕರೆಯಲಾಗಿದೆ. ಭಾನುವಾರ 4ಗಂಟೆಗೆ ಕರೆದ ಸಭೆಗೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಕಿಡಿ ಕಾರಿದ್ದಾರೆ. ಅದೆ ರೀತಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸಹ ಕಿಡಿ ಕಾರಿದ್ದು, ಈಗ ಸರ್ವಪಕ್ಷ ಸಭೆ ಕರೆದು ಏನು ಮಾಡ್ತಾರೆ ಎಂದು ಪ್ರಶ್ನಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕೋವಿಡ್ ಚಿಕಿತ್ಸೆಗೆ ಬೇಕಾಗುವ ಮೂಲಸೌಕರ್ಯ ಹೊಂದಿಸಿಟ್ಟುಕೊಳ್ಳದ, ರೋಗದ ನಿಯಂತ್ರಣಕ್ಕೆ ವ್ಯವಸ್ಥೆ ಮಾಡಿಕೊಳ್ಳದ, ಎಚ್ಚರಿಕೆ ಕಡೆಗಣಿಸಿದ ಸರ್ಕಾರ ಯಾವ ಸಭೆ ನಡೆಸಿ ಏನು ಉಪಯೋಗ ಎಂದು ಕೇಳಿದ್ದಾರೆ.




Leave a Reply

Your email address will not be published. Required fields are marked *

error: Content is protected !!