ಆಲಮೇಲ ಪಟ್ಟಣ ಪಂಚಾಯ್ತಿ ವಾರ್ಡ್ ಮೀಸಲಾತಿ ಪ್ರಕಟ

258

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಜಿಲ್ಲೆಯ ನೂತನ ತಾಲೂಕು ಆಲಮೇಲ ಪಟ್ಟಣ ಪಂಚಾಯ್ತಿಯ 19 ವಾರ್ಡ್ ಗಳ ಮೀಸಲಾತಿಯನ್ನು ಪ್ರಕಟಿಸಿ ರಾಜ್ಯಪತ್ರ ಹೊರಡಿಸಲಾಗಿದೆ. ಸರ್ಕಾರ ಹೊರಡಿಸಿರುವ ಆದೇಶದಲ್ಲಿ ಮೀಸಲಾತಿ ಈ ರೀತಿಯಾಗಿದೆ.

1ನೇ ವಾರ್ಡ್ ಪರಿಶಿಷ್ಟ ಜಾತಿ, 2ನೇ ವಾರ್ಡ್ ಹಿಂದುಳಿದ ವರ್ಗ ಎ ಮಹಿಳೆ, 3ನೇ ವಾರ್ಡ್ ಸಾಮಾನ್ಯ ಮಹಿಳೆ, 4ನೇ ವಾರ್ಡ್ ಸಾಮಾನ್ಯ ಮಹಿಳೆ, 5ನೇ ವಾರ್ಡ್ ಹಿಂದುಳಿದ ವರ್ಗ ಎ, 6ನೇ ವಾರ್ಡ್ ಪರಿಶಿಷ್ಟ ಜಾತಿ ಮಹಿಳೆ, 7ನೇ ವಾರ್ಡ್ ಸಾಮಾನ್ಯ ಮಹಿಳೆ, 8ನೇ ವಾರ್ಡ್ ಹಿಂದುಳಿದ ವರ್ಗ ಬಿ, 9ನೇ ವಾರ್ಡ್ ಸಾಮನ್ಯ, 10ನೇ ಸಾಮಾನ್ಯ ಮಹಿಳೆ, 11ನೇ ವಾರ್ಡ್ ಹಿಂದುಳಿದ ವರ್ಗ ಎ, 12ನೇ ವಾರ್ಡ್ ಪರಿಶಿಷ್ಟ ಪಂಗಡ, 13ನೇ ವಾರ್ಡ್ ಸಾಮಾನ್ಯ ಮಹಿಳೆ, 14ನೇ ವಾರ್ಡ್ ಸಾಮಾನ್ಯ, 15ನೇ ವಾರ್ಡ್ ಸಾಮಾನ್ಯ, 16ನೇ ವಾರ್ಡ್ ಪರಿಶಿಷ್ಟ ಜಾತಿ ಮಹಿಳೆ, 17ನೇ ವಾರ್ಡ್ ಪರಿಶಿಷ್ಟ ಜಾತಿ, 18ನೇ ವಾರ್ಡ್ ಸಾಮನ್ಯ ಹಾಗೂ 19ನೇ ಸಾಮಾನ್ಯ ಸ್ಥಾನ ಮೀಸಲು ನೀಡಲಾಗಿದೆ.

ಇನ್ನು ತಾಲೂಕಿನಲ್ಲಿ ಪಟ್ಟಣ ಪಂಚಾಯ್ತಿಯ ವಾರ್ಡ್ ವಾರ್ ಶುರುವಾಗಲಿದೆ. ಸ್ಥಳೀಯ ರಾಜಕೀಯ ನಾಯಕರ ಪಾಲಿಟ್ರಿಕ್ಸ್ ಆರಂಭವಾಗಲಿದ್ದು, ಇನ್ನೇನು ಚುನಾವಣೆ ದಿನಾಂಕ ಘೋಷಣೆಯೊಂದು ಬಾಕಿ ಉಳಿದಿದೆ.




Leave a Reply

Your email address will not be published. Required fields are marked *

error: Content is protected !!